ಪ್ರಜಾಧ್ವನಿ ಬಸ್ ಯಾತ್ರೆಗೆ ಅದ್ಧೂರಿ ಸ್ವಾಗತ

0
24
ನವಲಗುಂದ

ನವಲಗುಂದ: ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರದ ಭಾಗವಾಗಿ ಕಾಂಗ್ರೆಸ್‌ ಹಮ್ಮಿಕೊಂಡಿರುವ ಪ್ರಜಾಧ್ವನಿ ಬಸ್‌ ಯಾತ್ರೆ ಮಂಗಳವಾರ ಸಂಜೆ ಪಟ್ಟಣಕ್ಕೆ ಆಗಮಿಸಿತು.
ಪಕ್ಷದ ಸ್ಥಳೀಯ ನಾಯಕರು ಯಾತ್ರೆಯನ್ನು ಅದ್ಧೂರಿಯಾಗಿ ಬರಮಾಡಿಕೊಂಡರು.
ಪಟ್ಟಣದ ಲಿಂಗರಾಜ ವೃತ್ತದಲ್ಲಿ ಕ್ರೇನ್ ಮೂಲಕ ಸಿದ್ದರಾಮಯ್ಯನವರಿಗೆ ಅಭಿಮಾನಿಗಳು ಇಪ್ಪತ್ತು ಅಡಿಯ ಚೆಂಡು ಹೂವು, ಬಿಳಿ ಸೇವಂತಿ ಹೂವು, ತುಳಸಿ ಮಿಶ್ರಿತ ತಿರಂಗಾ ಮಾಲೆ ಹಾಕಿ, ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದರು.
ಕಾಂಗ್ರೆಸ್ ಮುಖಂಡರು, ನೂರಾರು ಮಂದಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸ್ವಾಗತಿಸಿದರು. ಯಾತ್ರೆಯ ವಾಹನದ ಮೇಲೆ ಹೂವಿನ ಮಳೆ ಸುರಿಸಲಾಯಿತು.
ಸಿದ್ದರಾಮಯ್ಯ, ಅವರು ಕಾರ್ಯಕರ್ತರತ್ತ ಕೈಬೀಸಿ ಮುಂದಕ್ಕೆ ಚಲಿಸಿದರು. ನೂರಾರು ಬೈಕ್, ಕಾರ್‌ಗಳಲ್ಲಿ ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಮಾಜಿ ಸಚಿವ ಕೆ.ಎನ್. ಗಡ್ಡಿ, ಕಾಂಗ್ರೆಸ್ ಗ್ರಾಮೀಣ ಯುವ ಘಟಕದ ಅಧ್ಯಕ್ಷ ವಿನೋದ ಅಸೂಟಿ ಬೆಂಬಲಿಗರು ಪಕ್ಷದ ನಾಯಕರನ್ನು ಅದ್ಧೂರಿಯಾಗಿ ಸ್ವಾಗತಿಸಿದರು.
ಪಟ್ಟಣದಲ್ಲೆಲ್ಲ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ ಬ್ಯಾನರ್‌ಗಳು ರಾರಾಜಿಸುತ್ತಿದ್ದವು. ಇದೇ ವೇಳೆ ರೈತ ಭವನಕ್ಕೆ ತೆರಳಿದ ಸಿದ್ದರಾಮಯ್ಯ ರೈತ ಹುತಾತ್ಮ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿದರು.

Previous articleತಂದೆಯಿಂದ ಮಗನ ಕೊಲೆ
Next articleಸರ್ಕಾರಿ ನೌಕರರ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವ ವಿಶ್ವಾಸ : ಬೊಮ್ಮಾಯಿ