ರಾಹುಲ್ ಗಾಂಧಿ ಅವರು ಹೇಳುವ ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ
ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬಿಜೆಪಿ ಮತ್ತು ಎನ್‌ಡಿಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದಾರೆ.