ನವದೆಹಲಿ: ವಿಪಕ್ಷಗಳ ಒಕ್ಕೂಟ 2024ರ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಮುನ್ನಡೆಯುವ ಸೂಚನೆ ನೀಡಿದ್ದು ಇಂದು ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಈ ಮಹತ್ವದ ಮಾತುಕತೆ ನಡೆದಿದೆ. 2024ರ ಲೋಕಸಭಾ ಚುನಾವಣೆಗೆ ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ಹೋರಾಡಲು ಚರ್ಚೆ ನಡೆಯುತ್ತಿದೆ. ಅಧಿಕಾರ ಹಂಚಿಕೆ, ಮುಂದಾಳತ್ವ, ನಾಯಕತ್ವ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಯುತ್ತಿದ್ದು ಎಲ್ಲಾ ಸಮಸ್ಯೆಗಳಿಗೆ 2024ರ ಲೋಕಸಭಾ ಚುನಾವಣೆಯೆ ಉತ್ತರ ಎಂದಿದ್ದಾರೆ.