ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಜಾಗತಿಕ ಮಟ್ಟದಲ್ಲಿ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಜನಪ್ರಿಯತೆಯಲ್ಲಿ ಶೇ. 76ರಷ್ಟು ಮತಗಳನ್ನು ಪಡೆಯುವ ಮೂಲಕ ಮತ್ತೇ ಅವರು ನಂಬರ್ 1 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ.
ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪಟ್ಟಿಯಲ್ಲಿ ಫೆಬ್ರವರಿಗೆ ಹೋಲಿಕೆ ಮಾಡಿದರೆ ಪ್ರಧಾನಿ ಮೋದಿ ಅವರ ಜನಪ್ರಿಯತೆಯಲ್ಲಿ ಸ್ವಲ್ಪ ಮಟ್ಟದ ಕುಸಿತ ಕಂಡುಬಂದಿದ್ದು ಶೇ. 78ರಿಂದ 76ಕ್ಕೆ ಇಳಿಕೆಯಾಗಿದೆ.
ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಶೇ. 61 ರೇಟಿಂಗ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಮೂರು, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಾಲ್ಕು, ಬ್ರೆಜಿಲಿಯನ್ ಅಧ್ಯಕ್ಷ ಲುಲ ಡೆ ಸಿಲ್ವ ಐದನೇ ಸ್ಥಾನ ಪಡೆದುಕೊಂಡಿದ್ದಾರೆ. ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಶೇ. 41ರಷ್ಟು ಅಂಕದೊಂದಿಗೆ 6ನೇ ಸ್ಥಾನದಲ್ಲಿದ್ದಾರೆ.