ಪ್ರಧಾನಿ ಮೋದಿ ಸಹಕಾರ ಕೋರಿದ ಡಿಕೆಶಿ

0
9

ಕರ್ನಾಟಕವನ್ನು ಸುಭದ್ರ, ಸುಂದರ ಹಾಗೂ‌ ಬಲಿಷ್ಠಗೊಳಿಸಲು ನಿಮ್ಮ ಸಹಕಾರವಿರಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೋರಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ ಡಿ.ಕೆ. ಶಿವಕುಮಾರ ಅವರು “ನಿಮ್ಮ ಶುಭ ಹಾರೈಕೆಗೆ ಹೃದಯಪೂರ್ವಕ ಧನ್ಯವಾದಗಳು. ಕರ್ನಾಟಕವನ್ನು ಸುಭದ್ರ, ಸುಂದರ ಹಾಗೂ‌ ಬಲಿಷ್ಠಗೊಳಿಸುವ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ. ಮತ್ತೊಮ್ಮೆ ತಮಗೆ ಧನ್ಯವಾದಗಳು.” ಎಂದು ಟ್ವೀಟ್‌ ಮಾಡಿದ್ದಾರೆ.

Previous articleಪ್ರಗತಿಗಾಗಿ ಕಾಂಗ್ರೆಸ್ ಪಕ್ಷ ಬದ್ಧ: ಜನತೆಗೆ ಧನ್ಯವಾದ ಅರ್ಪಿಸಿದ ಸೋನಿಯಾ
Next articleʻಡೋಂಟ್ ಡಿಸ್ಟರ್ಬ್ʼ ಎಂ.ಬಿ.‌ ಪಾಟೀಲ್‌ಗೆ ಗದರಿದ ಡಿಕೆಶಿ