ಮಂಗಳೂರು: ಬೆಳ್ಳಾರೆಯು ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಗಳಿಗೆ ಶರಣಾಗುವಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಎಚ್ಚರಿಕೆ ನೀಡಿದೆ.
ಆರೋಪಿಗಳು ಜೂ.೩೦ರೊಳಗೆ ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿಯನ್ನು ಮುಟ್ಟುಗೋಲು ಹಾಕುವುದಾಗಿ ಎನ್‌ಐಎ ಎಚ್ಚರಿಸಿದೆ. ಎನ್‌ಐಎ ಅಧಿಕಾರಿಗಳು ಈ ವಿಷಯವನ್ನು ಇಂದು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ ಮೂಲಕ ಘೋಷಣೆ ಮಾಡುತ್ತಿದೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗುತ್ತಿದೆ.
ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಮತ್ತು ಬೆಳ್ಳಾರೆಯ ಮುಸ್ತಫಾ ಮನೆಗೆ ಎನ್‌ಐಎ ಅಧಿಕಾರಿಗಳು ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ. ಆರೋಪಿಗಳ ಮನೆಯ ಗೋಡೆ ಹಾಗೂ ಸುಳ್ಯ, ಬೆಳ್ಳಾರೆಯ ಸಾರ್ವಜನಿಕ ಸ್ಥಳಗಳಲ್ಲಿ ಆರೋಪಿಗಳ ಭಾವಚಿತ್ರ ಇರುವ ನ್ಯಾಯಾಲಯದ ಆದೇಶದ ಪ್ರತಿ ಅಂಟಿಸಿದ್ದಾರೆ. ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿಂದತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್‌ಐಎ ಸುಳ್ಯ, ಬೆಳ್ಳಾರೆ ಹಾಗೂ ಕೊಡಗು ಜಿಲ್ಲೆಯಲ್ಲಿ ಶೋಧ ನಡೆಸುತ್ತಿದೆ