ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ

0
12

ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಿಕ್ಕೋಡಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದಿದೆ.
ಬಾಳುಮಾಮಾ ಜಾತ್ರೆಯಲ್ಲಿ ಸಾವಿರಾರು ಜನರು ನಿನ್ನೆ ಪ್ರಸಾದ ಸೇವಿಸಿದ್ದರು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನು 200ಕ್ಕೂ ಹೆಚ್ಚು ಜನ ರಾತ್ರಿಯೂ ಸೇವಿಸಿದ್ದರು ಎನ್ನಲಾಗಿದೆ. ಇನ್ನು ಅಸ್ವಸ್ಥರಾದವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವೈದ್ಯಕೀಯ ತಂಡ ಗ್ರಾಮದಲ್ಲೇ ಬೀಡುಬಿಟ್ಟಿದೆ. 30 ಜನರಿಗೆ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ, 10 ಜನರಿಗೆ ಕೆರೂರಿನ ಅಂಗವಾಡಿಯಲ್ಲಿ ಹಾಗೂ 10 ಜನರಿಗೆ ಯಕ್ಸಂಬಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Previous articleಕಮಲಾ ಮೊಹರಣ ಪಾದ ಮುಟ್ಟಿ ನಮಸ್ಕರಿಸಿದ ಮೋದಿ
Next articleವಿಶ್ವದ ನಂ.1 ಚೆಸ್​ ಚುತುರನನ್ನ ಮಣಿಸಿದ ಭಾರತದ ಗ್ರ್ಯಾಂಡ್‌ಮಾಸ್ಟರ್‌ ಪ್ರಜ್ಞಾನಂದ