Home ತಾಜಾ ಸುದ್ದಿ ಫೆ. 6ರಂದು ರಾಜ್ಯಕ್ಕೆ ಪ್ರಧಾನಿ ಭೇಟಿ

ಫೆ. 6ರಂದು ರಾಜ್ಯಕ್ಕೆ ಪ್ರಧಾನಿ ಭೇಟಿ

0
modi

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆ. 6ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು..
ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮ ಉದ್ಘಾಟಿಸುವರು. ನಂತರ ತುಮಕೂರು ಜಿಲ್ಲಾ ಪ್ರವಾಸಕ್ಕೆ ತೆರಳುವರು. ಅಲ್ಲಿನ ಗುಬ್ಬಿ ತಾಲೂಕಿನ ಬಿದರೇಹಳ್ಳಿಯಲ್ಲಿ ಎಚ್‌ಎಎಲ್‌ನ ಹೆಲಿಕಾಪ್ಟರ್ ಉತ್ಪಾದನಾ ಕಾರ್ಖಾನೆ ಉದ್ಘಾಟಿಸುವರು ಎಂದರು.

Exit mobile version