ಬಟ್ಟಪಾಡಿಯ ಕಡಲ್ಕೊರೆತ ಸ್ಥಳ ಪರಿಶೀಲಿಸಿದ ಮುಖ್ಯಮಂತ್ರಿಗಳು

0
9

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿ ಪರಿಶೀಲನೆ ಹಾಗೂ ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ನಡೆಸಲು ಆಗಮಿಸಿರುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆ.1ರ ಮಂಗಳವಾರ ಸಂಜೆ ಉಳ್ಳಾಲ ತಾಲೂಕಿನ ಬಟ್ಟಪಾಡಿಯ ಕಡಲ್ಕೊರೆತ ಹಾನಿ ಪ್ರದೇಶಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿ, ಸ್ಥಳೀಯರೊಂದಿಗೆ‌ ಮಾತನಾಡಿದರು.
ಈ ಸಂದರ್ಭದಲ್ಲಿ ರಾಜ್ಯ ವಿಧಾನಸಭೆಯ ಸ್ವೀಕರ್ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್,
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಿಲ್ಲಾಧಿಕಾರಿ ಮುಲ್ಲೈ ‌ಮುಗಿಲನ್ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಮುಖಂಡರು, ಸಂತ್ರಸ್ತರಿದ್ದರು

Previous articleಜಿಲ್ಲೆಯನ್ನು ಮತ್ತೆ ಮೊದಲ ಸ್ಥಾನಕ್ಕೆ ತರಬೇಕು
Next articleVISL ಕಾರ್ಖಾನೆ ಆಗಸ್ಟ್ 10 ರಿಂದ ಪುನರಾರಂಭ