ಬೆಂಗಳೂರು : ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ, ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು “ರಾಜ್ಯದ 120ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಎದುರಾಗಿದ್ದು, ಬಹುತೇಕ ಅಣೆಕಟ್ಟುಗಳು ಬರಿದಾಗಿ ನಮ್ಮ ರೈತ ಸಮುದಾಯ ಒಣ ಬೇಸಾಯವನ್ನೂ ಮಾಡಲಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇನ್ನು ಕಾಲಹರಣ ಮಾಡದೆ, ಕೂಡಲೇ ಬರಪೀಡಿತ ಪ್ರದೇಶಗಳನ್ನು ಘೋಷಿಸಿ, ರೈತರಿಗೆ ಪರಿಹಾರ ನೀಡಬೇಕು, ಬರ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.