Home News ಬಸ್‌-ಕಾರು ಡಿಕ್ಕಿ: ಮೂವರು ಸಾವು, ಇಬ್ಬರು ಗಂಭೀರ

ಬಸ್‌-ಕಾರು ಡಿಕ್ಕಿ: ಮೂವರು ಸಾವು, ಇಬ್ಬರು ಗಂಭೀರ

ಮಡಿಕೇರಿ: ಕೆಎಸ್ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಪೆಟ್ರೋಲ್ ಬಂಕ್ ಬಳಿ‌ ಇಂದು ಮಧ್ಯಾಹ್ನ ಜರುಗಿದೆ.
ಕೆಎಸ್ಆರ್‌ಟಿಸಿ ಬಸ್ ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದು, ಐವರು ಪ್ರಯಾಣಿಸುತ್ತಿದ್ದ ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಅದರಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೂ ಗಂಭೀರ ಗಾಯಗಳಾಗಿದೆ. ಸದ್ಯ ಗಾಯಾಳುಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version