Home ತಾಜಾ ಸುದ್ದಿ ಬಾಕಿ ಬಿಲ್‍ ಬಿಡುಗಡೆಗೆ ಗುತ್ತಿಗೆದಾರರ ಸಂಘದಿಂದ ಸಿಎಂಗೆ ಮನವಿ

ಬಾಕಿ ಬಿಲ್‍ ಬಿಡುಗಡೆಗೆ ಗುತ್ತಿಗೆದಾರರ ಸಂಘದಿಂದ ಸಿಎಂಗೆ ಮನವಿ

0

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಮಗಾರಿಗಳ ಬಾಕಿ ಇರುವ ಬಿಲ್‍ಗಳನ್ನು ಬಿಡುಗಡೆ ಮಾಡುವಂತೆ ರಾಜ್ಯ ಗುತ್ತಿಗೆದಾರರ ಸಂಘಟನೆಯ ಅಧ್ಯಕ್ಷ ಕೆಂಪಣ್ಣ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಬಳಿಕ ಮಾತನಾಡಿದ ಕೆಂಪಣ್ಣ ಅವರು, ಬಾಕಿ ಇರುವ ಬಿಲ್‍ಗಳ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದೇವೆ. ಬಿಲ್‍ಗಳನ್ನು ಬಿಡುಗಡೆ ಮಾಡುವ ಬಗ್ಗೆ ಸಿಎಂ ಕೂಡ ಭರವಸೆ ನೀಡಿದ್ದಾರೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಹಳಿ ತಪ್ಪಿರುವ ಆರ್ಥಿಕತೆಯನ್ನು ಸರಿಪಡಿಸಲು ಸ್ವಲ್ಪ ಕಾಲಾವಕಾಶ ಬೇಕು ಎಂದು ಸಿಎಂ ತಿಳಿಸಿದ್ದಾರೆ ಎಂದರು.

Exit mobile version