ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ನಿನ್ನೆ ಫುಡ್ ಡೆಲಿವರಿ ಬಾಯ್ ಜೊತೆ ದ್ವಿಚಕ್ರ ವಾಹನದಲ್ಲಿ ರಾಜ್ಯ ಬೆಂಗಳೂರಿನಲ್ಲಿ ಸಂಚರಿಸಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇಂದು ಬೆಳಿಗ್ಗೆ ಕನ್ನಿಂಗ್ಹ್ಯಾಮ್ ರಸ್ತೆಯ ಕೆಫೆಯಲ್ಲಿ ಗ್ರಾಹಕರ ಜೊತೆ ಕಾಫಿ ಕುಡಿದು ಬಳಿಕ ಬಿಎಂಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದ್ದಾರೆ. ಜತೆಗೆ ಬಸ್ ನಲ್ಲಿ ಪ್ರಯಾಣಿಕರೊಂದಿಗೆ ಚರ್ಚೆ ಮಾಡಿದ್ದಾರೆ.