ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದ್ದೆ. ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ನೀಡಲಾಗುವ ಗೌರವ ಡಾಕ್ಟರೇಟ್‌ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಜನರಾಗಿದ್ದಾರೆ. ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವವು ಶುಕ್ರವಾರ ನಡೆಯಲಿದ್ದು, ಅಂದು ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.