ಬಿಜೆಪಿಗೆ ಮಾಜಿ ಡಿಸಿಎಂ ರಾಜೀನಾಮೆ

0
22

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ತಮ್ಮ ಆಪ್ತ ಸಹಾಯಕನ ಮೂಲಕ ಬಿಜೆಪಿ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೊತೆಗೆ ಬಿಜೆಪಿ ಉಪಾಧ್ಯಕ್ಷ ಸ್ಥಾನ, ಪಕ್ಷದ ಕೋರ್​ ಕಮಿಟಿ ಸದಸ್ಯ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದಾರೆ. ಇತ್ತ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ. ನನ್ನ ಕ್ಷೇತ್ರದ ಕಾರ್ಯಕರ್ತರು, ಬೆಂಬಲಿಗರ ಅನುಮತಿ ಪಡೆದಿದ್ದೇನೆ. ಇಂದು ಸಂಜೆ 4.30ಕ್ಕೆ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ. ನಾನು ಬೆಳಗಾವಿ ಜಿಲ್ಲೆಗೆ ಸೀಮಿತವಾಗಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿಲ್ಲ. ಇಡೀ ರಾಜ್ಯ ಸುತ್ತಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶಕ್ತಿಮೀರಿ ಪ್ರಯತ್ನ ಮಾಡುವೆ. ರಾಜ್ಯದ ಇತರೆ ಭಾಗಗಳಲ್ಲಿ ನನ್ನನ್ನು ಬಳಸಿಕೊಳ್ಳುವುದಾಗಿ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಮ್ಮತಿ ಸೂಚಿಸಿದ್ದೇನೆ ಎಂದರು.

Previous articleನಿವೃತ್ತಿಯಲ್ಲ ಪುನರಾರಂಭ
Next articleಬಸ್‌-ಕಾರು ಡಿಕ್ಕಿ: ಮೂವರು ಸಾವು, ಇಬ್ಬರು ಗಂಭೀರ