ಬಿಜೆಪಿಯಲ್ಲಿನ ಆಂತರಿಕ ಬೇಗುದಿ ಯಾವಾಗ ಸ್ಫೋಟವಾಗುತ್ತೊ ಗೊತ್ತಿಲ್ಲ

0
23
ಜಗದೀಶ ಶೆಟ್ಟರ್‌

ಹುಬ್ಬಳ್ಳಿ : ಬಿಜೆಪಿಯಲ್ಲಿ ಆಂತರಿಕ ಬೇಗುದಿ ಇದೆ. ಅದು ಯಾವಾಗ, ಯಾವ ರೂಪದಲ್ಲಿ ಸ್ಪೋಟವಾಗುತ್ತದೆಯೊ ಗೊತ್ತಿಲ್ಲ ಎಂದು ವಿಧಾನ ಪರಿಷತ್ ನೂತನ ಸದಸ್ಯ ಹಾಗೂ ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ ಬೇಗುದಿ ಬಹಿರಂಗವಾಗಿಯೇ ಗೊತ್ತಾಗುತ್ತಿದೆ. ಚುನಾವಣೆಯಲ್ಲಿ ಸೋತಿರುವ ಬಿಕಜೆಪಿ ನಾಯಕರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆ ತರುವ ಪ್ರಯತ್ನ ನಡೆಸಿಲ್ಲ ಎಂದು ಹೇಳಿದರು. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ಜಗದೀಶ ಶೆಟ್ಟರ ಅವರ ಅತ್ಯಾಪ್ತರಾಗಿದ್ದು, ವಿಧಾನ ಸಭೆ ಚುಮಾವಣೆಯಲ್ಲಿ ಪರಾಭವಗೊಂಡ ಹಿನ್ನೆಲೆಯಲ್ಲಿ ಅವರೂ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಿಷಯ ಸಾರ್ವಜನಿಕವಾಗಿ ವ್ಯಾಪಕ ಚರ್ಚೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೆಟ್ಟರ ಈ ಪ್ರತಿಕ್ರಿಯೆ ನೀಡಿದರು.
ಪ್ರತಾಪ ಸಿಂಹ ಹೆಸರು ಬಹಿರಂಗ ಪಡಿಸಲಿ: ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕೆಲ ಕ್ಷೇತ್ರಗಳಲ್ಲಿ ಒಪ್ಪಂದ ಮಾಡಿಕೊಂಡಿದ್ದವು ಎಂಬ ಬಗ್ಗೆ ಸಂಸದ ಪ್ರತಾಪ ಸಿಂಹ ಈಚೆಗೆ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಜಗದೀಶ ಶೆಟ್ಟರ, ಯಾರು ಯಾರ ಜೊತೆಗೆ ಒಪ್ಪಂದ ಮಾಡಿಕೊಂಡರು. ನಾಲ್ಕು ಗೋಡೆಯ ನಡುವೆ ಒಪ್ಪಂದ ಆಗಿದೆ ಎನ್ನುತ್ತಾರೆ. ಹಾಗಾದರೆ ಒಪ್ಪಂದ ಮಾಡಿಕೊಂಡವರ ಹೆಸರೂ ಇವರಿಗರ ಗೊತ್ತಿರಲೇಬೇಕು? ಯಾರವರು? ಹೆಸರು ಬಹಿರಂಗ ಪಡಿಸಬೇಕು. ಸುಮ್ಮನೆ ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

Previous articleರಾಜೀನಾಮೆ ಕೊಟ್ಟಿಲ್ಲ: ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ
Next articleಅಕ್ಕಿ ಕೊಡದೇ ಬಿಜೆಪಿ ರಾಜಕೀಯ