ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಬಾರಿಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು ಲಿಂಗಾಯತ ನಾಯಕರನ್ನು ತುಳಿದಿದ್ದೇ ವಿಧಾನಸಭಾ ಚುನಾವಣೆಯ ಸೋಲಿಗೆ ಕಾರಣವಾಗಿದೆ ಎಂದರು.
ಇರುವ ಅಲ್ಪ ಸ್ವಲ್ಪ ಲಿಂಗಾಯತ ನಾಯಕರನ್ನು ಕೈಬಿಟ್ಟರೆ ಬಿಜೆಪಿ ಕೆಟ್ಟ ಸ್ಥಿತಿಗೆ ತಲುಪುತ್ತದೆ. ರಾಜ್ಯ ಬಿಜೆಪಿಯಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಬದಲಾಗಬೇಕು ಎಂದು ಆಗ್ರಹಿಸಿದ್ದಾರೆ.

























