ಬಿಜೆಪಿ ಅಭ್ಯರ್ಥಿಗಳ ನಕಲಿ ಪಟ್ಟಿ ಬಿಟ್ಟವರ ವಿರುದ್ಧ ಕ್ರಮ: ಅರುಣ ಸಿಂಗ್‌

0
24
arun singh

ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪಟ್ಟಿಯನ್ನು ಹರಿಬಿಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಸಭೆ ನಡೆಸುತ್ತಿದ್ದೇವೆ. ಬಳಿಕ ಈ ಪಟ್ಟಿಯನ್ನು ಕೇಂದ್ರ ಸಮಿತಿ ಸಂಸದೀಯ ಮಂಡಳಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪಟ್ಟಿ ನಕಲಿಯಾಗಿದೆ. ಇಂತಹ ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Previous articleಎಲೆಕ್ಷನ್‌ ಬಳಿಕ ನಾನೇ ಕಿಂಗ್‌
Next articleಸಿ.ಟಿ. ರವಿ ವಿರುದ್ಧ ಪೋಸ್ಟ್‌ ಮಾಡಿದ್ದವರ ವಿರುದ್ಧ FIR