ಬಿಜೆಪಿ ಜನ ಸ್ಪಂದನ ಕಾರ್ಯಕ್ರಮಕ್ಕೆ 9 ಜನ ಪುರೋಹಿತರಿಂದ ಗಣಹೋಮ

0
15

ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನ ಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದೊಡ್ಡಬಳ್ಳಾಪುರದ ದೇವನಹಳ್ಳಿ ರಸ್ತೆಯ L&T ಮುಂಭಾಗದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ. ಈ ಹಿಂದೆ ಜನೋತ್ಸವ ಕಾರ್ಯಕ್ರಮ ಎರಡು ಬಾರಿ ರದ್ದುಗೊಂಡಿದ್ದು, ಈ ಬಾರಿ ಜನಸ್ಪಂದನ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಇನ್ನು ಈ ಬಾರಿ ಕಾರ್ಯಕ್ರಮಕ್ಕೆ ಯಾವುದೇ ಅಡೆತಡೆ ಎದುರಾಗಬಾರದೆಂದು 9 ಜನ ಪುರೋಹಿತರಿಂದ ಗಣಹೋಮ ನಡೆಸಲಾಗಿದೆ.

Previous articleರಾಜ್ಯವನ್ನು ಭ್ರಷ್ಟಾಚಾರದಿಂದ ಮುಕ್ತ ಮಾಡುವುದು ನಮ್ಮ ಗುರಿ ; ಡಿ.ಕೆ ಶಿವಕುಮಾರ್
Next article55ನೇ ವಸಂತಕ್ಕೆ ಕಾಲಿಟ್ಟ ಬಾಲಿವುಡ್ ಸೂಪರ್​ಸ್ಟಾರ್ ಅಕ್ಷಯ್ ಕುಮಾರ್