ಬಿಜೆಪಿ-ಜೆಡಿಎಸ್ ಮೈತ್ರಿ ಗೇಮ್ ಚೇಂಜರ್ ಆಗಲಿದೆ

0
23
BASAVARAJ BOMAI

ಬೆಂಗಳೂರು: ಜೆಡಿಎಸ್ ಪಕ್ಷ ಎನ್‌ಡಿಎ ಭಾಗವಾಗುವುದರಿಂದ ರಾಜ್ಯದಲ್ಲಿ ರಾಜಕೀಯವಾಗಿ ಗೇಮ್ ಚೇಂಜರ್ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ‌‌.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ‌. ಎರಡೂ ಪಕ್ಷಗಳು ಒಟ್ಟಿಗೆ ಹೋಗಬೇಕೆನ್ನುವ ವಿಚಾರದಲ್ಲಿ ಎರಡು ಪಕ್ಷಗಳ ನಡುವೆ ಮಾತುಕತೆಯಾಗಿದೆ. ವರಿಷ್ಠರು ತೆಗೆದುಕೊಂಡ ತೀರ್ಮಾನ ಸ್ವಾಗತಾರ್ಹ ಎಂದರು.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಅನಿಷ್ಠ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದರ ವಿರುದ್ಧ ಎರಡೂ ಪಕ್ಷಗಳು ಒಟ್ಟಾಗಿ ಹೋರಾಟ ಮಾಡಬೇಕು ಎನ್ನುವುದು ಜನರ ಬಯಕೆಯಾಗಿತ್ತು. ಮುಂದಿನ ದಿನಗಳಲ್ಲಿ ಎರಡು ಪಕ್ಷಗಳು ಒಟ್ಟಾಗಿ ಹೋರಾಟ ಮಾಡುತ್ತೇವೆ ಎಂದರು.
ಮೈತ್ರಿ ಕುರಿತು ಎರಡೂ ಪಕ್ಷಗಳ ಕೆಲವರಲ್ಲಿ ಅಸಮಾಧಾನ ಇದೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸಂದರ್ಭದಲ್ಲಿ ಹೈಕಮಾಂಡ್ ನಾಯಕರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ. ಇದು ಗೇಮ್ ಚೇಂಜರ್ ಆಗುತ್ತದೆ. ಸೀಟು ಹಂಚಿಕೆ ಮುಂದಿನ ದಿನಗಳಲ್ಲಿ ಆಗಲಿದೆ ಎಂದರು.

Previous articleರೋಗಿಗಳಿಗೆ ಶಿಲೀಂದ್ರಗೊಂಡ ಮಾತ್ರೆಗಳ ವಿತರಣೆ
Next articleಮೂವರು ಡಿಸಿಎಂ ಅವಶ್ಯವಿಲ್ಲ