ಬಿಜೆಪಿ ಟಿಕೆಟ್‌: ಹೊಸಮುಖಗಳತ್ತ ನಾಯಕರ ಚಿತ್ತ

0
182
BJP

ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಹೊಸಬರಿಗೆ ಟಿಕೆಟ್‌ ನೀಡುವ ಬಗ್ಗೆ ಚರ್ಚೆ ನಡೆದಿದ್ದು, 18ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್‌ ಮಿಸ್‌ ಆಗಲಿದೆ ಎಂಬ ಮಾತು ಕೇಳಿ ಬರುತ್ತಿದೆ.
ಈಗಾಗಲೇ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತು ಸರಣಿ ಸಭೆಗಳು ನಡೆದಿದ್ದು, ಇಂದು ಮತ್ತೊಂದು ಮಹತ್ವದ ಸಭೆ ನಡೆಯಲಿದೆ.
ಭ್ರಷ್ಟಾಚಾರ ಆರೋಪ, ಆಡಳಿತ ವಿರೋಧಿ ಅಲೆ ಜತೆಗೆ ಸಮೀಕ್ಷೆಯಲ್ಲಿ ಸೋಲುವ ಸಾಧ್ಯತೆ ಇರುವ ಶಾಸಕರಿಗೆ ಶಾಕ್‌ ಕೊಡಲು ಹೈಕಮಾಂಡ್‌ ಮುಂದಾಗಿದೆ. ಅಲ್ಲದೇ ಉತ್ತರ ಪ್ರದೇಶ, ಗುಜರಾತ್‌ನಲ್ಲಿ ಹೊಸ ಮುಖಗಳಿಗೆ ಟಿಕೆಟ್‌ ಕೊಟ್ಟು ಸಕ್ಸಸ್‌ ಆದ ರೀತಿಯಲ್ಲಿಯೇ ಕರ್ನಾಟಕದಲ್ಲಿ ವರ್ಕೌಟ್‌ ಮಾಡಲು ಕೇಂದ್ರ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

Previous articleನದಿಗೆ ಬಿದ್ದ ಮಗ: ಉಳಿಸಲು ಹೋದ ತಂದೆ ಮಗನೊಂದಿಗೆ ಸಾವು
Next articleಮಾಜಿ ಸಿಎಂ ಕಾರು ಅಪಘಾತ