ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್ಗೆ ಹೋಗುತ್ತೇನೆಂದು ವದಂತಿ ಹಬ್ಬಿಸುತ್ತಿದ್ದಾರೆ. ನಾನೂ ಎಲ್ಲಿಯೂ ಹೋಗಲ್ಲ. ಅದೆಲ್ಲವೂ ಸುಳ್ಳು ಎಂದರು.
ಇನ್ನು ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ, ಇಲ್ಲದಿದ್ದರೆ ಪಕ್ಷದ ಕೆಲಸ ಮಾಡಿಕೊಂಡು ಹೋಗುತ್ತೇನೆ. ಬಿಜೆಪಿಯಲ್ಲಿ ನನಗೆ ಗೌರವ ನೀಡಿದ್ದಾರೆ ಎಂದರು.