ಹುಬ್ಬಳ್ಳಿ: ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಕಪಿಮುಷ್ಠಿಯಲ್ಲಿದೆ. ಹೀಗಾಗಿಯೇ ಈವರೆಗೂ ವಿಪಕ್ಷ ನಾಯಕನ ಆಯ್ಕೆ ಸಾಧ್ಯವಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಪ ಸದಸ್ಯ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ. ಪ್ರತಿಪಕ್ಷದ ನಾಯಕನಿಲ್ಲದೆ ಅಧಿವೇಶನ ನಡೆಸುವ ಶೋಚನೀಯ ಪರಿಸ್ಥಿತಿ ಬಿಜೆಪಿಗೆ ಬಂದಿದೆ. ಒಂದು ರಾಷ್ಟ್ರೀಯ ಪಕ್ಷಕ್ಕೆ ವಿಪಕ್ಷ ನಾಯಕನಿಲ್ಲದರುವುದನ್ನು ಯಾವತ್ತೂ ನೋಡಿಲ್ಲ. ಇದು ಬಿಜೆಪಿ ಲೀಡರ್ ಲೆಸ್ ಕರ್ನಾಟಕ ಅನ್ನೋದು ತೋರಿಸಿಕೊಟ್ಟಿದೆ ಎಂದರು.