ಬೆಂಗಳೂರು: “ಗುಜರಾತ್ ಹೈಕೋರ್ಟ್ ನ ತೀರ್ಪು ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗ. ಇದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಕಾಂಗ್ರೆಸ್ಸಿನ ವಿರುದ್ಧ ಇಂಥ ಷಡ್ಯಂತ್ರಗಳನ್ನು ಮಾಡುವ ಬಿಜೆಪಿಯ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ” ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ಮೋದಿ ಸಮುದಾಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರ ಪ್ರಕರಣದ ಬಗ್ಗೆ ಮಾ. 23ರಂದು ತೀರ್ಪು ನೀಡಿದ್ದ ಸೂರತ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ, ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿಯವರು ತಮ್ಮ ಲೋಕಸಭಾ ಸ್ಥಾನವನ್ನು ಕಳೆದುಕೊಂಡಿದ್ದರು, ಸೂರತ್ ನ್ಯಾಯಾಲಯದ ತೀರ್ಪಿಗೆ ತಡೆಯಾಜ್ಞೆ ನೀಡಬೇಕೆಂದು ರಾಹುಲ್ ಗಾಂಧಿ, ಗುಜರಾತ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇಂದು ಅರ್ಜಿಯ ಕುರಿತಂತೆ ತೀರ್ಪು ಹೊರಬಿದ್ದಿದ್ದು, ರಾಹುಲ್ ಗಾಂಧಿಯವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.



























