ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ

0
6
ಶೆಟ್ಟರ್

ಗದಗ: ಬಿಜೆಪಿಯಲ್ಲಿ ಸಮರ್ಥ ನಾಯಕತ್ವದ ಕೊರತೆಯಾಗಿದ್ದು ಬಿಜೆಪಿಯ ಅನೇಕ ಜನ ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ನಾಯಕತ್ವ ಕೊರತೆಯಿದೆ. ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿ ಮಾರ್ಪಟ್ಟಿದೆ. ಬಿಜೆಪಿ ಮುಳಗುವ ಹಡಗಿನಂತಾಗಿದೆ. ಮುಳಗುವ ಹಡಗಿನಲ್ಲಿ ಉಳಿಯಲು ಅನೇಕ ಶಾಸಕರು, ಮಾಜಿ ಶಾಸಕರು ಹಿಂಜರಿಯುತ್ತಿದ್ದಾರೆ. ಈಗಾಗಲೇ ಅನೇಕ ಬಿಜೆಪಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ. ಅವರೇ ಸ್ವಯಂಸ್ಫೂರ್ತಿಯಿಂದ ಕಾಂಗ್ರೆಸ್‌ಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಯಾರು ಸೇರುತ್ತಾರೆ. ಯಾರು ತಮ್ಮ ಸಂಪರ್ಕದಲ್ಲಿದ್ದಾರೆಂದು ಈಗಲೇ ಹೇಳುವುದಿಲ್ಲ ಎಂದರು.

Previous articleವೃದ್ಧೆಗೆ ಶೌಚಾಲಯ ನಿರ್ಮಿಸಿಕೊಡುವ ಭರವಸೆ
Next articleಬಿ.ಎಲ್. ಸಂತೋಷ ಯೋಗ್ಯತೆ ಜನರಿಗೆ ತಿಳಿದಿದೆ