ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ

0
16
ಎನ್.ವೈ. ಗೋಪಾಲಕೃಷ್ಣ

ಶಿರಸಿ: ಕಾಂಗ್ರೆಸ್‌ ಸೇರ್ಪಡೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರೆನ್ನಲಾದ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.
ಶಿರಸಿಯ ಕಚೇರಿಗೆ ಆಗಮಿಸಿದ್ದ ಶಾಸಕ ಗೋಪಾಲಕೃಷ್ಣ ಕಾಗೇರಿ ಅವರ ಬಳಿ ರಾಜೀನಾಮೆ ಪತ್ರ ಸಲ್ಲಿಸಿದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಪಕ್ಷ ಸೇರ್ಪಡೆಯಾಗಿ ಅಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಗೋಪಾಲಕೃಷ್ಣ ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದಿದ್ದರು.

Previous articleಮಂಗಳೂರ: ಲಾಡ್ಜ್‌ನಲ್ಲಿ ಅವಳಿ ಹೆಣ್ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
Next articleರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ: ಜೋಶಿ ಭರವಸೆ