Home ತಾಜಾ ಸುದ್ದಿ ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ: 8ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯ

ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಗ್ನಿ ಅವಘಡ: 8ಕ್ಕೂ ಹೆಚ್ಚು ಸಿಬ್ಬಂದಿಗೆ ಗಾಯ

0

ಬೆಂಗಳೂರು: ಬಿಬಿಎಂಪಿ ಮುಖ್ಯ ಕಚೇರಿಯ ಆವರಣದ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 8ಕ್ಕೂ ಹೆಚ್ಚು ನೌಕರರು ಗಾಯಗೊಂಡಿದ್ದಾರೆ.
ಮುಖ್ಯ ಅಭಿಯಂತರರು ಶಿವಕುಮಾರ್, ಕಾರ್ಯಪಾಲಕ ಅಭಿಯಂತರರಾದ ಕಿರಣ್, ಸಂತೋಷ್ ಕುಮಾರ್, ವಿಜಯಮಾಲ, ಸಹಾಯಕ ಕಾರ್ಯಪಾಲಕ ಅಭಿಯಂತರ ಶ್ರೀಧರ್, ಪ್ರಥಮ ದರ್ಜೆ ಸಹಾಯಕ ಸಿರಾಜ್, ಆಪರೇಟರ್ ಜ್ಯೋತಿ, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ ಶ್ರಿನಿವಾಸ್, ಗಣಕಯಂತ್ರ ನಿರ್ವಾಹಕ ಮನೋಜ್ ಗಾಯಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾದಿಂದ ಪಾರಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

Exit mobile version