ರಾಯಚೂರು: ಬಿಸಿಯೂಟ ಸೇವಿಸಿ 70 ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡಿರುವ ಘಟನೆ ಅಪ್ಪನದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ. ಬಿಸಿಯೂಟದಲ್ಲಿ ಹಲ್ಲಿ ಬಿದ್ದ ಕಾರಣ ಮಧ್ಯಾಹ್ನ ಬಿಸಿಯೂಟ ಸೇವಿಸಿದ್ದ 70ಕ್ಕೂ ಹೆಚ್ಚು ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಕ್ಕಳನ್ನು ರಿಮ್ಸ್ ಆಸ್ಪತ್ರೆ ಹಾಗೂ ಉಳಿದ ವಿದ್ಯಾರ್ಥಿಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ, ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.