Home News ಬಿಸಿಸಿಐ ಅಧ್ಯಕ್ಷ ಬಿನ್ನಿ ಸಾಧ್ಯತೆ

ಬಿಸಿಸಿಐ ಅಧ್ಯಕ್ಷ ಬಿನ್ನಿ ಸಾಧ್ಯತೆ

ಬಿಸಿಸಿಐ

ಮುಂಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಅವರ ಉತ್ತರಾಧಿಕಾರಿಯಾಗಿ ೧೯೮೩ರ ವಿಶ್ವಕಪ್ ವಿಜೇತ ಭಾರತೀಯ ತಂಡದ ಸದಸ್ಯರಾಗಿ ಕರ್ನಾಟಕ ಮೂಲದ ರೋಜರ್ ಬಿನ್ನಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ೨೦೧೯ರ ನವೆಂಬರ್ ೧೯ ರಂದು ಬಿಸಿಸಿಐ ಅಧ್ಯಕ್ಷರಾಗಿ ಗಂಗೂಲಿ ಅಧಿಕಾರ ವಹಿಸಿಕೊಂಡಿರು. ಆದರೆ ಈ ವಿಷಯದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಟೀಕೆ ಮಾಡಿದೆ. ಗಂಗೂಲಿ ಬಿಜೆಪಿ ಸೇರಲು ನಿರಾಕರಿಸಿರಿಂದ ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಇಳಿಸಲಾಗುತ್ತಿದೆ ಎಂದು ಆರೋಪಿಸಿದೆ. ಆದರೆ ಇದನ್ನು ಬಿಜೆಪಿ ತಿರಸ್ಕರಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಮಮತಾ ಬ್ಯಾನರ್ಜಿ ಸರ್ಕಾರ ಏನೇನೂ ಪ್ರಯತ್ನ ಮಾಡುತ್ತಿಲ್ಲ ಎಂದು ತಿರುಗೇಟು ನೀಡಿದೆ.

Exit mobile version