Home ತಾಜಾ ಸುದ್ದಿ ಬೀದರ್ ಜಿಲ್ಲೆಯಲ್ಲಿ ರೆಡ್ ಅಲರ್ಟ್

ಬೀದರ್ ಜಿಲ್ಲೆಯಲ್ಲಿ ರೆಡ್ ಅಲರ್ಟ್

0

ಬೀದರ್ : ಪ್ರಸಕ್ತ ಸಾಲಿನ ಜೂನ್ 1 ರಿಂದ ಇಲ್ಲಿಯವರೆಗೆ ಇಡೀ ರಾಜ್ಯದಲ್ಲಿಯೇ ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಜಿಲ್ಲೆ ಶೇ. 26 ರಷ್ಟು ಹೆಚ್ಚುವರಿ ಮಳೆ ಪಡೆದಿದೆ.
ಆಂಧ್ರಪ್ರದೇಶದ ಉತ್ತರ ಭಾಗ ಹಾಗೂ ಒರಿಸ್ಸಾದ ಕರಾವಳಿ ಪ್ರದೇಶದ ಮೇಲೆ ವಾಯುಭಾರ ಕುಸಿತ ಉಂಟಾಗಿದ್ದು ಜುಲೈ 27ರಂದು ಬೀದರ್ ಜಿಲ್ಲೆಯಲ್ಲಿ ಸುಮಾರು 100 ಮಿಮಿ ಮಳೆ ಸುರಿಯುವ ನೀರಿಕ್ಷೆ ಇದೆ. ಜುಲೈ 27ಕ್ಕೆ ಅನ್ವಯವಾಗುವಂತೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತ ಕ್ರಮವಾಗಿ ಜುಲೈ 27ರಂದು ಬೀದರ್ ಜಿಲ್ಲೆಯಲ್ಲಿನ ಶಾಲಾ ಕಾಲೇಜುಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

Exit mobile version