Home ಅಪರಾಧ ಬೆಂಗಳೂರಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಬಸ್‌ಗಳು

ಬೆಂಗಳೂರಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಬಸ್‌ಗಳು

0

ಬೆಂಗಳೂರು: ಬಸ್‌ಗಳಿಗೆ ಬೆಂಕಿ ತಗುಲಿ ಕ್ಷಣ ಮಾತ್ರದಲ್ಲಿ 9 ಕ್ಕೂ ಹೆಚ್ಚು ಬಸ್‌ಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ವೀರಭದ್ರ ನಗರದ ಈ ಗ್ಯಾರೇಜ್‌ನಲ್ಲಿ ಬಸ್‌ಗಳ ರಿಪೇರಿ ಮಾಡಲಾಗುತ್ತಿತ್ತು. ಈ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಿಂತಿರುವ ಬಸ್‌ಗಳಿಗೆ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆ ಹತ್ತಾರು ಬಸ್‌ಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಮಾಡಲಾಗುತ್ತಿದೆ.
ಯಾವುದೇ ಪ್ರಾಣ ಹಾನಿ ನಡೆದಿರುವ ಬಗ್ಗೆ ವರದಿಯಾಗಿಲ್ಲ. ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗ ಇದಾಗಿತ್ತು. ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ. ಒಳಗೆ 10 ಬಸ್ ಗಳನ್ನು ನಿಲ್ಲಿಸಲಾಗಿದೆ. ಬೇರೆ ಬೇರೆ ಸಂಸ್ಥೆಗಳಿಗೆ ಸೇರಿರುವ ಬಸ್ ಗಳಾಗಿವೆ. ಈ ಪೈಕಿ ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

https://twitter.com/samyuktakarnat2/status/1718928352340332665

Exit mobile version