Home ತಾಜಾ ಸುದ್ದಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ NIA ದಾಳಿ

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ NIA ದಾಳಿ

0
NIA

ಬೆಂಗಳೂರು: ಬೆಂಗಳೂರು ನಗರದಲ್ಲಿ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮೇಲೆ NIA ದಾಳಿ ನಡೆಸಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ನಡೆಸಿ ಪರಿಶೀಲನೆ ಮಾಡುತ್ತಿದೆ. 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ನಗರದ 15ಕ್ಕೂ ಹೆಚ್ಚು ಕಡೆಗಳಲ್ಲ ರಾಷ್ಟ್ರೀಯ ತನಿಖಾ ದಳ ಮಂಗಳವಾರ ರಾತ್ರಿ ದಾಳಿ ಮಾಡಿದೆ. ಎಂಟು ಮಂದಿ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದು ಎನ್‌ಐಎ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮ ಬಾಂಗ್ಲಾ ವಲಸಿಗರು ಮಾನವ ಕಳ್ಳಸಾಗಾಣಿಕೆ ಮತ್ತು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಸಂಬಂಧ NIA ವಿಶೇಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆಧಾರದ ಮೇಲೆ 15 ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ. ಬೆಂಗಳೂರಿನ ಸೋಲದೇವನಹಳ್ಳಿ, ಕೆಆರ್ ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Exit mobile version