ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ: ಸಿಎಂ

0
22

ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮನ್ನು ಭೇಟಿಯಾದ ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಅವರಿಗೆ ತಿಳಿಸಿದರು.
ಪ್ರಸ್ತುತ ವೀಸಾ ಕಚೇರಿ ಚೆನ್ನೈನಲ್ಲಿರುವುದರಿಂದ ಬೆಂಗಳೂರಿನಿಂದ ಅಮೆರಿಕಕ್ಕೆ ಪ್ರಯಾಣಿಸುವವರಿಗೆ ತೊಂದರೆಯಾಗುತ್ತಿದೆ. ಪ್ರತಿನಿತ್ಯ ವಿದೇಶಿಗರು ಸೇರಿದಂತೆ 5 ಸಾವಿರಕ್ಕೂ ಹೆಚ್ಚು ಜನ ಅಮೆರಿಕಕ್ಕೆ ಪ್ರಯಾಣ ಬೆಳೆಸುವುದರಿಂದ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರಿನಲ್ಲಿ ವೀಸಾ ಕಚೇರಿಯನ್ನು ತೆರೆಯುವಂತೆ ಆಗ್ರಹಿಸಿದರು.
ಬೆಂಗಳೂರಿನಲ್ಲಿರುವ ಅಮೆರಿಕದ ಸಂಸ್ಥೆಗಳಿಗೆ ಎಲ್ಲ ಅಗತ್ಯ ಸಹಕಾರವನ್ನು ರಾಜ್ಯ ಸರ್ಕಾರ ಒದಗಿಸುತ್ತಿದ್ದು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ದಿಮೆಗಳನ್ನು ಸ್ಥಾಪಿಸಲು ಅತ್ಯುತ್ತಮ ವಾತಾವರಣವಿದೆ. ಹಾಗಾಗಿ, ವಿದೇಶಿ ಬಂಡವಾಳ ಹೂಡಿಕೆ ರಾಜ್ಯದಲ್ಲಿ ಹೆಚ್ಚಾಗಿದೆ. ಬೆಂಗಳೂರು ಭವಿಷ್ಯದ ನಗರ. ಆದ್ದರಿಂದ ಬೆಂಗಳೂರಿನಲ್ಲಿ ವೀಸಾ ಕಚೇರಿಯ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳು ಮನವರಿಕೆ ಮಾಡಿಕೊಟ್ಟರು.

Previous articleಬಿಜೆಪಿಗರದ್ದು ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!!
Next articleಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಎ. ಸ್ವಾಮಿ ನಿಧನ