ಬೆಂಗಳೂರು: ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವಂತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಕುಮಾರಕೃಪಾ ಗೆಸ್ಟ್ಹೌಸ್ನಲ್ಲಿ ಮಾತನಾಡಿದ ಅವರು ಆಗಸ್ಟ್ 15 ರ ಒಳಗಾಗಿ ನಗರದಲ್ಲಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳ್ನು ತೆರವು ಮಾಡುತ್ತೇವೆ. ಯಾರಾದರೂ ಅಕ್ರಮವಾಗಿ ಫ್ಲೆಕ್ಸ್ ಹಾಕಿದ್ದರೆ 50 ಸಾವಿರ ರೂ. ದಂಡ ವಿಧಿಸಲಾಗುವುದು ಎಂದರು. ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ನನಗೆ ಶುಭಾಶಯ ಕೋರಿ ನನ್ನ ಅಭಿಮಾನಿ ಫ್ಲೆಕ್ಸ್ ಹಾಕಿದರೂ ಕ್ರಮ ಕೈಗೊಳ್ಳುತ್ತೇವೆ. ಫ್ಲೆಕ್ಸ್, ಬ್ಯಾನರ್ ಹಾಕಿದವರ ವಿರುದ್ಧ ಕೇಸ್ ದಾಖಲಿಸಿ ಬಿಬಿಎಂಪಿ ಕ್ರಮ ಕೈಗೊಳ್ಳಲಿದೆ ಎಂದರು.