Home ತಾಜಾ ಸುದ್ದಿ ಬೆಂಗಳೂರು ಯೋಗ್ಯವಲ್ಲ ಎನ್ನುವವರು ಬೆಂಗಳೂರಿಗೆ ಬರಬೇಡಿ: ಮುನಿರತ್ನ

ಬೆಂಗಳೂರು ಯೋಗ್ಯವಲ್ಲ ಎನ್ನುವವರು ಬೆಂಗಳೂರಿಗೆ ಬರಬೇಡಿ: ಮುನಿರತ್ನ

ಬೆಂಗಳೂರು: ಬೆಂಗಳೂರು ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬಾರದು. ಇವರನ್ನು ಬೆಂಗಳೂರಿಗೆ ಬನ್ನಿ ಎಂದು ಯಾರನ್ನು ಕರೆದಿಲ್ಲ ಎಂದು ಬೆಂಗಳೂರನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರನ್ನು ಸಚಿವ ಮುನಿರತ್ನ ಕಿಡಿಕಾರಿದರು.

ಬೆಂಗಳೂರನ್ನು ಬೈಯ್ಯುವ ಜನರು ತಿಂದ ತಟ್ಟೆಯಲ್ಲೇ ಹೇಸಿಗೆ ಮಾಡುತ್ತಾರೆ ಎನ್ನುವ ಗಾದೆ ರೀತಿಯೇ ಮಾಡುತ್ತಿದ್ದಾರೆ. ಅದೇ ರೀತಿ ಬೆಂಗಳೂರನ್ನು ತೆಗಳುವವರು ನೀಚ ಸಂಸ್ಕೃತಿಗೆ ಸೇರುತ್ತಾರೆ. ಬೆಂಗಳೂರಲ್ಲೇ ಇದ್ದು, ಬೆಂಗಳೂರಿನ ಅನ್ನವನ್ನೇ ತಿಂದು, ನಂತರ ಬೆಂಗಳೂರಿಗೆ ಬೈಯ್ಯುತ್ತಿದ್ದಾರೆ. ಈ ರೀತಿಯಾಗಿ ಯಾರು ಬೈಯ್ಯುತ್ತಿದ್ದಾರೋ ಅವರಿಂದಲೇ ಬೆಂಗಳೂರು ಹಾಳಾಗಿದೆ ಎಂದು ಕಿಡಿಕಾರಿದರು.

Exit mobile version