Home ತಾಜಾ ಸುದ್ದಿ ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಬೆಳಗಾವಿ ಜಿಲ್ಲೆಯಾದ್ಯಂತ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

0

ಬೆಳಗಾವಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ‌ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.


Exit mobile version