ಬೆಳಗಾವಿ ಪ್ರಯಾಣಿಕರಿಗೆ ಬೊಂಬಾಟ್ ಸುದ್ದಿ

0
12

ಬೆಂಗಳೂರು: ದೆಹಲಿ ಮತ್ತು ಬೆಳಗಾವಿ ನಡುವೆ ಅಕ್ಟೋಬರ್ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ಜಿಲ್ಲೆಯ ಜನರ ಬಹುದಿನಗಳ ಬೇಡಿಕೆ ಈಡೇರಲಿದೆ.
ಸತತ ಪ್ರಯತ್ನಗಳ ಫಲವಾಗಿ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ದೆಹಲಿ ಮತ್ತು ಬೆಳಗಾವಿ ನಡುವೆ ಅಕ್ಟೋಂಬರ್‌ 1 ರಿಂದ ಪ್ರತಿದಿನ ವಿಮಾನಯಾನ ಸಂಚಾರದ ಸೇವೆಯನ್ನು ಪ್ರಾರಂಭಿಸಲು ಸಮ್ಮತಿಸಿದೆ. ಅಕ್ಟೋಂಬರ್‌ 29 ರಿಂದ ಸ್ಟಾರ್ ಏರ್‌ಲೈನ್ಸ್ ಸಂಸ್ಥೆಯು ಪುಣೆ-ಬೆಳಗಾವಿ ನಡುವೆ ಪ್ರತಿದಿನ ವಿಮಾನಯಾನ ಸಂಚಾರ ಸೇವೆಯನ್ನು ಪ್ರಾರಂಭಿಸಲಿದೆ. ಅಕ್ಟೋಂಬರ್‌ 31 ರಿಂದ ಪುಣೆ-ಬೆಳಗಾವಿ ನಡುವೆ ಇಂಡಿಗೋ ಏರ್‌ಲೈನ್ಸ್ ಸಂಸ್ಥೆಯು ವಾರದಲ್ಲಿ 3 ದಿನ ( ಮಂಗಳವಾರ, ಗುರುವಾರ ಮತ್ತು ಶನಿವಾರ) ವಿಮಾನಯಾನ ಸಂಚಾರ ಸೇವೆಯನ್ನು ಪ್ರಾರಂಭಿಸಲಿದೆ. ಬೆಳಗಾವಿಯಿಂದ ದೆಹಲಿ ಹಾಗೂ ಪುಣೆ ನಗರಗಳಿಗೆ ವಿಮಾನಯಾನ ಸೇವೆ ಪ್ರಾರಂಭಿಸಿರುವ ಇಂಡಿಗೋ ಮತ್ತು ಸ್ಟಾರ್ ಏರ್‌ಲೈನ್ಸ್ ಸಂಸ್ಥೆಗಳಿಗೆ ಜಿಲ್ಲೆಯ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದಿದ್ದಾರೆ.

Previous articleಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನ
Next articleಹಾಕಿ: ದಾಖಲೆಯ ನಾಲ್ಕನೇ ಸಲ ಟ್ರೋಫಿ ಗೆದ್ದ ಭಾರತ