ಬೆಂಗಳೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ.
ರಾಜ್ಯಾದ್ಯಂತ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, ರಾಜ್ಯದಲ್ಲಿ ಹಲವು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ. ಏಕಕಾಲದಲ್ಲಿ 90 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಹಾಸನ, ಹಾವೇರಿ, ಕಲಬುರಗಿ, ದಾವಣಗೆರೆ ,ಬೆಳಗಾವಿ ಸೇರಿದಂತೆ ಏಕಕಾಲದಲ್ಲಿ 90 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.