ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಬೈಕ್ ಸವಾರ ಸಾವು

0
76

ಮೈಸೂರು: ಬೈಕ್‌ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ತಳಗವಾದಿ ಗೇಟ್ ಬಳಿ ನಡೆದಿದೆ.
ನೆಲಮಾಕನಹಳ್ಳಿ ಗ್ರಾಮದ ನಿವಾಸಿ ಶಿವಕುಮಾರ್(21) ಮೃತಪಟ್ಟ ದುರ್ದೈವಿ, ನೆಲಮಾಕನಹಳ್ಳಿ ಗ್ರಾಮದ ಮದ್ದೂರು ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಮದ್ದೂರು ಕಡೆಯಿಂದ ಬಂದ ಕ್ಯಾಂಟರ್ ಡಿಕ್ಕಿಹೊಡೆದು ಈ ಅವಘಡ ಸಂಭವಿಸಿದೆ. ಮೈಸೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Previous articleಮುಂದಿನ ಐದು ವರ್ಷಗಳವರೆಗೆ ಉಚಿತ ಪಡಿತರ
Next articleಅಣ್ಣನ ಮಗನನ್ನೇ ಶೂಟ್ ಮಾಡಿ ಹತ್ಯೆ ಮಾಡಿರುವ ಚಿಕ್ಕಪ್ಪ