ಚಿಕ್ಕೋಡಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮ ಯೋಧ ಗುರುವಾರ ತಡರಾತ್ರಿ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.
ಲಕ್ಷಣ ಘೋರ್ಪಡೆ ಮೃತ ಯೋಧ. ರಜೆಯ ಮೇಲೆ ಗ್ರಾಮಕ್ಕೆ ಆಗಮಿಸಿದ್ದ ಲಕ್ಷö್ಮಣ ಚಿಕ್ಕೋಡಿ ಹೋಗಿ ಊರಿಗೆ ಮರಳುವಾಗ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂದೆ ಕುಳಿತಿದ್ದ ಮತ್ತೊಬ್ಬ ಯುವಕ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.