ಭಾರತ್ ಜೊಡೋಗೆ 1 ವರ್ಷ: ಎಲ್ಲಾ ಜಿಲ್ಲೆಗಳಲ್ಲಿ ಭಾರತ್ ಜೋಡೋ ಯಾತ್ರೆ

0
12

ನವದೆಹಲಿ : ಸೆ. 7ರಂದು ‘ಭಾರತ್ ಜೋಡೊ ಯಾತ್ರೆʼಗೆ ಮೊದಲ ವಾರ್ಷಿಕೋತ್ಸವ, ಅಂದು ದೇಶದಾದ್ಯಂತ 722 ಭಾರತ್ ಜೋಡೋ ಯಾತ್ರೆಗಳನ್ನು ಪ್ರಾರಂಭಿಸುತ್ತಿದ್ದೇವೆ ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ‘ಭಾರತ್ ಜೋಡೊ ಯಾತ್ರೆʼಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೆ. 7ರಂದು ದೇಶಾದ್ಯಂತ ಜಿಲ್ಲಾ ಮಟ್ಟದಲ್ಲಿ ಯಾತ್ರೆ ನಡೆಸಲು ಪಕ್ಷ ನಿರ್ಧರಿಸಿದೆ. ರಾಹುಲ್ ಗಾಂಧಿ ಅವರು ತಮಿಳುನಾಡಿನ ಕನ್ಯಾಕುಮಾರಿಯಿಂದ ಜಮ್ಮು ಹಾಗೂ ಕಾಶ್ಮೀರದ ವರೆಗೆ ‘ಭಾರತ್ ಜೋಡೊ’ ಯಾತ್ರೆ ನಡೆಸಿದ್ದರು. ಇದು 4081 ಕಿಲೋಮೀಟರ್‌ಗಳು, 12 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳು, 75 ಜಿಲ್ಲೆಗಳು ಮತ್ತು 76 ಲೋಕಸಭಾ ಕ್ಷೇತ್ರಗಳನ್ನು ಒಳಗೊಂಡು 136 ದಿನಗಳ ಕಾಲ ಸಾರ್ವಜನಿಕರ ಮನಸ್ಸಿನಲ್ಲಿ ಅಳಿಸಲಾಗದ ಛಾಪು ಮೂಡಿಸಿತು. ‘ಭಾರತ್ ಜೋಡೊ ಯಾತ್ರೆ’ಗೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೆ.7ರಂದು ಪ್ರತಿ ಜಿಲ್ಲೆಗಳಲ್ಲಿ ಸಂಜೆ 5ರಿಂದ 6 ಗಂಟೆ ವರೆಗೆ ‘ಭಾರತ್ ಜೋಡೊ ಯಾತ್ರೆ’ ನಡೆಸಲು ಪಕ್ಷ ನಿರ್ಧರಿಸಿದೆ ಎಂದು ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

Previous articleಕಾವೇರಿ ತೀರ್ಪು ಕನ್ನಡಿಗರ ಪರ ಬರಲಿ: ಮಂಡ್ಯದಲ್ಲಿ ಕಾವೇರಿ ಮಾತೆಗೆ ಅಭಿಷೇಕ
Next articleರಾಜ್ಯದ ಸ್ವಾಯತ್ತತೆಯನ್ನು ಒಸಕಿ ಹಾಕುವ ಕೆಲಸ ಮಾಡಲು ಹೊರಟಿದ್ದಾರೆ