ಭೀಕರ ರಸ್ತೆ ಅಪಘಾತ: ಮೂವರು ಸಾವು

0
14


ಧಾರವಾಡ: ಧಾರವಾಡದ ಬೈಪಾಸ್​ ರಸ್ತೆಯಲ್ಲಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.

ರವಿವಾರ ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರೆ 4ರ ಹಳಿಯಾಳ ಸೇತುವೆ ಬಳಿ ಘಟನೆ ನಡೆದಿದೆ. ಮೃತರನ್ನು ಬಿಂದುಗೌಡ (35) ಹಾಗೂ ಬಾಪುಗೌಡ (36) ಎಂದು ಗುರುತಿಸಲಾಗಿದೆ. ಇನ್ನೋರ್ವನ ಮಾಹಿತಿ ತಿಳಿದುಬಂದಿಲ್ಲ.
ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟರೆ, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದಾಗ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಹಾಸನ, ಮೈಸೂರು ಮೂಲದ ವ್ಯಕ್ತಿಗಳು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Previous articleಎಪಿಎಂಸಿ ಕಾಯ್ದೆ ರದ್ದುಪಡಿಸುತ್ತೇವೆ: ಸಚಿವ ಶಿವಾನಂದ ಪಾಟೀಲ
Next articleಶಕ್ತಿ ಯೋಜನೆಗೆ ಸಿಎಂ ಚಾಲನೆ