Home ತಾಜಾ ಸುದ್ದಿ ಮಂತ್ರಾಲಯದಲ್ಲಿ ಸಾಮೂಹಿಕ ಅಷ್ಟೋತ್ತರ ಪಾರಾಯಣ

ಮಂತ್ರಾಲಯದಲ್ಲಿ ಸಾಮೂಹಿಕ ಅಷ್ಟೋತ್ತರ ಪಾರಾಯಣ

0

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುವಾರ ಅಧಿಕ ಶ್ರಾವಣ ಮಾಸದ ಅಂಗವಾಗಿ ಶ್ರೀರಾಘವೇಂದ್ರ ಸ್ವಾಮಿಗಳವರ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಮಾರ್ಗದರ್ಶನದಲ್ಲಿ ಸಾಮೂಹಿಕ ಅಷ್ಟೋತ್ತರ ಪಾರಾಯಣ ನಡೆಯಿತು.

ಶ್ರೀರಾಯರ ಮೂಲ ಮೂಲಬೃಂದಾವನಕ್ಕೆ ಶ್ರೀಮಠದ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮಹಾಭಿಷೇಕ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಶ್ರೀಮಠದ ಶಿಷ್ಯರು ಹಾಗೂ ಸಾಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಸಾಮೂಹಿಕ ಅಷ್ಟೋತ್ತರ ಪಾರಾಯಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಭಕ್ತರಿಗೆ ಉಚಿತವಾಗಿ ವಸತಿ ವ್ಯವಸ್ಥೆಯನ್ನು ಮಾಡಲಾಗಿತ್ತು.

Exit mobile version