ಮಠದ ನಾಮಫಲಕಕ್ಕೆ ಸಗಣಿ: ಪ್ರಕ್ಷಬ್ದ ವಾತಾವರಣ

0
28

ಕಲಬುರಗಿ: ಜೇವರ್ಗಿ ತಾಲೂಕಿನ ಆಂದೋಲ ಗ್ರಾಮದ ಶ್ರೀ ಕರುಣೇಶ್ವರ ಸಂಸ್ಥಾನ ಹಿರೇಮಠದ ನಾಮಫಲಕಕ್ಕೆ ಬುಧವಾರ ಬೆಳಗ್ಗೆ ಕಿಡಿಗೇಡಿಗಳು ಸಗಣಿ ಬಳಿದು ವಿಕೃತಿ ಮೆರೆದಿದ್ದಾರೆ.
ಶ್ರೀಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಅವರ ಭಾವಚಿತ್ರದ ಮೇಲೂ ಸಗಣಿ ಬಳಿದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಡೂರು ಶ್ರೀನಿವಾಸಲು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆ ಖಂಡಿಸಿ ಆಂದೋಲ ಗ್ರಾಮದಲ್ಲಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟಿಸಿದರು. ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ತಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇನೆ ಎಂದಿದ್ದಾರೆ.

Previous articleಎಫ್‌ಡಿಎ ಪರೀಕ್ಷೆ ಅಕ್ರಮ: ಉನ್ನತ ಮಟ್ಟದ ತನಿಖೆಗೆ ಸರ್ಕಾರ ಸಿದ್ಧ
Next article೧.೨೪ ಕೋಟಿ ಕಳ್ಳತನ ಪ್ರಕರಣ: ಹತ್ತು ಜನ ಆರೋಪಿಗಳ ಬಂಧನ