ಮಣಿಪುರ, ಹರಿಯಾಣದಲ್ಲಿನ ದೌರ್ಜನ್ಯ ಖಂಡಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

0
9

ಹುಬ್ಬಳ್ಳಿ: ಮಣಿಪುರ ಮತ್ತು ಹರಿಯಾಣ ರಾಜ್ಯಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಹಾಗೂ ಅಲ್ಲಿನ ಕ್ರೈಸ್ತರಿಗೆ ರಕ್ಷಣೆ ಹಾಗು ಭದ್ರತೆ ನೀಡಬೇಕೆಂದು ಒತ್ತಾಯಿಸಿ ವಿವಿಧ ಸರ್ವಧರ್ಮ ಒಕ್ಕೂಟದ ವತಿಯಿಂದ ನಗರದಲ್ಲಿಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಪ್ರತಿಭಟನೆಯು ಇಲ್ಲಿನ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಸ್ಟೇಶನ್ ರೋಡ್, ದುರ್ಗದಬೈಲ್, ಕೊಪ್ಪಿಕರ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚೆನ್ನಮ್ಮ ವೃತ್ತದಲ್ಲಿ ತಹಶಿಲ್ದಾರ ಮೂಲಕ ರಾಷ್ಟ್ರಪತಿಯವರು ಹಾಗೂ ರಾಜ್ಯಪಾಲರಿಗೆ ಮನವಿ ಅರ್ಪಿಸಲಾಯಿತು.

ನಂತರ ಮಾತನಾಡಿದ ಸರ್ವಧರ್ಮದ ಮುಖಂಡರು ಪ್ರತಿಭಟನಾಕಾರರು ಮಣಿಪುರ ಹಾಗೂ ಹರಿಯಾಣ ರಾಜ್ಯಗಳಲ್ಲಿ ಹಿಂಸಾಚಾರ ಹಾಗೂ ದೌರ್ಜನ್ಯಗಳು ಬುಗಿಲೆದ್ದು ಮೇ ೩ ನೇ ತಾರೀಖಿನಿಂದ ಈವರೆಗೆ ಸಾಕಷ್ಟು ಘಟನೆಗಳು ನಡೆದರೂ ಸಹಿತ ಕೇಂದ್ರ ಸರ್ಕಾರವಾಗಲಿ ಅಥವಾ ಅಲ್ಲಿನ ರಾಜ್ಯ ಸರ್ಕಾರವಾಗಲಿ ಜಾನಮೌನ ವಹಿಸಿದ್ದು, ಮಣಿಪುರ ಹಾಗೂ ಹರಿಯಾಣಗಳು ಧಾರ್ಮಿಕ ಕಟ್ಟಡಗಳು ಹಾಗೂ ಸರ್ಕಾರಿ ಆಸ್ತಿಪಾಸ್ತಿಗಳು ಹಾನಿಯಾಗಿದ್ದು, ಖಂಡನೀಯವಾಗಿದೆ ಎಂದು ದೂರಿದರು.

ಈ ಕೂಡಲೇ ಕೇಂದ್ರ ಸರ್ಕಾರ ಅಲ್ಲಿನ ರಾಜ್ಯಗಳಲ್ಲಿ ನಡೆಯುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಸದಾನಂದ ಡಂಗಣವರ, ರಾಜಶೇಖರ ಮೆಣಸಿನಕಾಯಿ, ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣ ಕಲ್ಲಕುಂಟ್ಲಾ, ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ಸುಧಾ ಮಣಿಕುಂಟ್ಲಾ, ವಿವಿಧ ದಲಿತ ಪರ ಸಂಘಟನೆಗಳ ಮುಖಂಡ ಗುರುನಾಥ ಉಳ್ಳಿಕಾಶಿ, ದೊರಾಜ್ ಮಣಿಕುಂಟ್ಲಾ ಸೇರಿದಂತೆ ಕ್ರೈಸ್ತ ಸಮುದಾಯ ಹಾಗೂ ವಿವಿಧ ಸರ್ವಧರ್ಮಿಗಳ ಮುಖಂಡರು ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Previous articleನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಮೂಡಲಗಿರಿಯಪ್ಪ ಬಂಧನ
Next articleತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾವೇರಿ ನದಿಗಿಳಿದು ಪ್ರತಿಭಟನೆ