ಮಣಿಪುರ ಹಿಂಸಾಚಾರ: ಸಿಎಂ ರಾಜೀನಾಮೆ ಸಾಧ್ಯತೆ

0
22

ಮಣಿಪುರ ಮುಖ್ಯಮಂತ್ರಿಗಳ ಸಚಿವಾಲಯ ಮತ್ತು ರಾಜಭವನದಿಂದ ಸುಮಾರು 100 ಮೀಟರ್ ದೂರದಲ್ಲಿರುವ ನೂಪಿ ಲಾಲ್ ಕಾಂಪ್ಲೆಕ್ಸ್‌ನಲ್ಲಿ ಶುಕ್ರವಾರ ನೂರಾರು ಮಹಿಳೆಯರು ಜಮಾಯಿಸಿ, ಸುಮಾರು ಎರಡು ತಿಂಗಳಿನಿಂದ ರಾಜ್ಯದಲ್ಲಿ ಸಂಭವಿಸಿದ ಹಿಂಸಾಚಾರದ ಹಿನ್ನೆಲೆಯಲ್ಲಿ ಸಿಎಂ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡದಂತೆ ಒತ್ತಾಯಿಸಿದರು. ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು, ಸಿಎಂ ಬಿರೇನ್ ಸಿಂಗ್ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 1 ಗಂಟೆಗೆ ಅವರು ರಾಜ್ಯಪಾಲರಾದ ಅನುಸೂಯಾ ಉಯ್ಕೆ ಅವರನ್ನು ಭೇಟಿ ಮಾಡಲಿದ್ದು, ಬಹುತೇಕ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.

Previous articleದಿಲ್ಲಿ ಮೆಟ್ರೊದಲ್ಲಿ ಪ್ರಧಾನಿ ಮೋದಿ
Next articleವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ: ಪತ್ರಕ್ಕೆ ರಕ್ತ ಮುದ್ರೆ