ಬೆಂಗಳೂರು: ರಮೇಶ್ ಜಾರಕಿಹೊಳಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ದೂರು ಸಲ್ಲಿಸಿದೆ.
ಬೆಂಗಳೂರಿನ ಹೈ ಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿರುವ ಕಾಂಗ್ರೆಸ್, ಪ್ರತಿ ಮತದಾರರಿಗೆ 6000 ರೂಪಾಯಿ ಲಂಚದ ಬಹಿರಂಗ ಆಮಿಷ ಒಡ್ಡುವ ಮೂಲಕ ಮತದಾರರನ್ನು ಖರೀದಿ ಮಾಡಲು ಸಂಚು ರೂಪಿಸಿದ್ದಾರೆ ಎಂದು ದೂರು ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.