ಮತ್ತಷ್ಟು ಇಂದಿರಾ ಕ್ಯಾಂಟೀನ್ ಆರಂಭ

0
19

ಬೆಳಗಾವಿ: ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಹೊಸದಾಗಿ ೧೮೮ ಇಂದಿರಾ ಕ್ಯಾಂಟೀನ್ ತೆರೆಯಲಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ತುಂಬಾ ಸಂಕಷ್ಟದಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಬಿಜೆಪಿ ಸರ್ಕಾರ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಗೆ ಕೆಟ್ಟ ಹೆಸರು ತರಲು ಸರಿಯಾಗಿ ನಿರ್ವಹಣೆ ಮಾಡದೇ ಕ್ಯಾಂಟೀನ್‌ಗಳನ್ನು ಮುಚ್ಚುವ ಸ್ಥಿತಿಗೆ ತಂದಿತ್ತು. ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈ ಬಿಡುವ ಪ್ರಶ್ನೆಯೇ ಇಲ್ಲ. ಕ್ಯಾಂಟೀನ್‌ಗಳ ಪುನಶ್ಚೇತನಕ್ಕೆ ೨೪೦ ಕೋಟಿ ರೂ. ಖರ್ಚು ಮಾಡುತ್ತಿದ್ದೇವೆ ಎಂದರು.
ಪ್ರಾದೇಶಿಕವಾಗಿ ಬೆಳಗಾವಿ ಭಾಗದಲ್ಲಿ ರೊಟ್ಟಿ ಊಟ, ಮೈಸೂರು ಭಾಗದಲ್ಲಿ ರಾಗಿ ಮುದ್ದೆ, ಬೆಂಗಳೂರಿನಲ್ಲಿ ಅನ್ನ, ಇಡ್ಲಿ ವಿತರಿಸುವ ಮೆನು ಸಿದ್ಧಪಡಿಸಿ ಜಾರಿಗೊಳಿಸುತ್ತೇವೆ. ಈಗಾಗಲೇ ಇಡೀ ೨೪ ಜಿಲ್ಲೆಯಲ್ಲಿ ಸಮೀಕ್ಷೆಯಾಗಿದ್ದು ಸಭೆ ನಡೆಸಿದ್ದೇವೆ ಎಂದು ವಿವರಿಸಿದರು.

Previous articleಚಿತ್ರದುರ್ಗ ಕಲುಷಿತ ನೀರು ಪ್ರಕರಣ : ಮೃತರ ಕುಟುಂಬಕ್ಕೆ ಉದ್ಯೋಗದ ಭರವಸೆ
Next articleವಾಹನ ಢಿಕ್ಕಿ ಚಿರತೆ ಸಾವು