Home News ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ

ಮತ್ತೆ ‘ಕೈ’ ಸೇರಲು ಮುಂದಾದ ಎ.ಬಿ.ಮಾಲಕರೆಡ್ಡಿ

ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಇಂದು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿರುವ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.
ಕಾಂಗ್ರೆಸ್ ನಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಲಕರೆಡ್ಡಿ ಅವರು ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರನ್ನ ಸೋಲಿಸಿದ ರೂವಾರಿಗಳಲ್ಲಿ ಮಾಲಕರೆಡ್ಡಿ ಕೂಡ ಒಬ್ಬರು. ಆದ್ರೆ ಈಗ ಹಳೆ ದ್ವೇಷ ಮರೆತು ಮತ್ತೆ ಘರ್ ವಾಪ್ಸಿ ಆಗಲು ಮುಂದಾಗಿದ್ದಾರೆ.

Exit mobile version