Home ತಾಜಾ ಸುದ್ದಿ ಮನೆಗೆ ಬಂದವರನ್ನು ಸ್ವಾಗತಿಸುವುದು ನಮ್ಮ ಪರಂಪರೆ

ಮನೆಗೆ ಬಂದವರನ್ನು ಸ್ವಾಗತಿಸುವುದು ನಮ್ಮ ಪರಂಪರೆ

0

ಬೆಳಗಾವಿ: 30 ವರ್ಷಗಳಿಂದ ರಾಜಕಾರಣ ಮಾಡುತ್ತಿದ್ದು, ಯಾರೊಂದಿಗೂ ರಾಜಿ ಮಾಡಿಕೊಂಡಿಲ್ಲ. ಮನೆಗೆ ಬಂದವರನ್ನು ಸ್ವಾಗತಿಸುವುದು ನಮ್ಮ ಪರಂಪರೆಯಾಗಿದೆ ಆಗಿದೆ ಎಂದು ಶಾಸಕ ಬಸವನಗೌಡ ಪಾಟೀಲ ಯತ್ನಾಳಗೆ ಮಾಜಿ ಸಿಎಂ‌ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬೆಳಗಾವಿಯ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮೊದಲು ಭಾಷಣ ಮಾಡಿದ್ದ ಶಾಸಕ ಯತ್ನಾಳ ಅವರು, ಕಾಂಗ್ರೆಸ್ ನಾಯಕರನ್ನು ಮನೆಗೆ ಕರೆಯಿಸಿಕೊಳ್ಳಬೇಡಿ ಎಂದು ಹೇಳಿದ್ದರು. ನಂತರ ಭಾಷಣ ಮಾಡಿದ ಮಾಜಿ ಸಿಎಂ ಬೊಮ್ಮಾಯಿ, ನಾನೇನೂ ಯಾರನ್ನೂ ಮನೆಯೊಳಗಿನ ರೂಮಿಗೆ ಕರೆದುಕೊಂಡು ಹೋಗಿ ಮಾತನಾಡಿಲ್ಲ. ಕಾಂಗ್ರೆಸ್ ನಾಯಕರು ಜೊತೆಗಿನ ಎಲ್ಲ ಮಾತುಕತೆಗಳು ಬಹಿರಂಗವಾಗಿಯೇ ನಡೆಯುತ್ತವೆ. ಮನೆಗೆ ಬಂದವರನ್ನು ಸ್ವಾಗತ ಮಾಡುವುದು ನಮ್ಮ ಪರಂಪರೆಯಾಗಿದೆ ಎಂದು ಹೇಳಿದರು.

Exit mobile version